ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಪ್ರತಿಭಟನೆ ನಡೆಸಿತು. ಹಿಂದಿ ದಿವಸ್ ಅನ್ನು ಕರಾಳ ದಿನವೆಂದು ಆಚರಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಸೆಪ್ಟೆಂಬರ್ 14ನ್ನು ಹಿಂದಿ ದಿವಸ್ ಎಂದು ಆಚರಿಸಲಾಗುತ್ತಿದೆ. ಹಿಂದಿಯನ್ನು ಒತ್ತಾಯ ಪೂರ್ವಕವಾಗಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಹಿಂದಿಯನ್ನು ರಾಷ್ಟ್ರ ಭಾಷೆ ಮಾಡಬೇಕು ಎಂದು ಹಿಂದಿ ವಾಲಾಗಳು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ರಾಷ್ಟ್ರೀಯ ಹಿಂದಿ ದಿವಸ್ ಆಚರಿಸಲಾಗುತ್ತಿದೆ. ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುತ್ತಿದೆ. ಹಿಂದಿ ಕಲಿಸಬೇಕು ಎಂಬ ಸರ್ಕಾರದ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು ಎಂದು ಮುಖ್ಯಮಂತ್ರಿ ಅವನರನ್ನು ಕರವೇ ಕಾರ್ಯಕರ್ತರು ಆಗ್ರಹಿಸಿದರು.
ಕರವೇ ಜಿಲ್ಲಾಧ್ಯಕ್ಷ ಶಿವಣ್ಣ ಸೂಡೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭೋದಯ, ಪ್ರಮುಖರಾದ ಪ್ರಕಾಶ್ ತಮ್ಮಡಿಹಳ್ಳಿ, ಮಂಜುನಾಥ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200