ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಮಹಾವೀರ ಸರ್ಕಲ್‍ವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೆಲಸ ಮಾಡಿಕೊಡುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಬಹಿರಂಗವಾಗಿದೆ. ಇಂತಹ ಹೇಯ ಕೃತ್ಯಕ್ಕೆ ಇಳಿದ ರಮೇಶ್ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಮೇಶ್ ಜಾರಕಿಹೊಳಿ ಫೋಟೊಗಳಿಗೆ ಚಪ್ಪಲಿ ಏಟು ಕೊಟ್ಟು, ರಸ್ತೆ ಮೇಲಿಟ್ಟು ತುಳಿದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪ್ರಮುಖರಾದ ರಾಮೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರೀಶ್, ಯಮುನಾ ರಂಗೇಗೌಡ, ಸುವರ್ಣಾ ನಾಗರಾಜ್, ಹೆಚ್.ಸಿ.ಯೋಗೇಶ್, ಕೆ.ರಂಗನಾಥ್, ಚಂದ್ರಭೂಪಾಲ್, ಎನ್.ಡಿ.ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಪ್ರತಿಭನೆಟಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















