ರಮೇಶ್ ಜಾರಕಿಹೊಳಿ ಫೋಟೊಗೆ ಶಿವಮೊಗ್ಗದಲ್ಲಿ ಮಹಿಳೆಯರಿಂದ ಚಪ್ಪಲಿ ಏಟು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಕಚೇರಿಯಿಂದ ಮಹಾವೀರ ಸರ್ಕಲ್‍ವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೆಲಸ ಮಾಡಿಕೊಡುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಬಹಿರಂಗವಾಗಿದೆ. ಇಂತಹ ಹೇಯ ಕೃತ್ಯಕ್ಕೆ ಇಳಿದ ರಮೇಶ್ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಮೇಶ್ ಜಾರಕಿಹೊಳಿ ಫೋಟೊಗಳಿಗೆ ಚಪ್ಪಲಿ ಏಟು ಕೊಟ್ಟು, ರಸ್ತೆ ಮೇಲಿಟ್ಟು ತುಳಿದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್‍, ಪ್ರಮುಖರಾದ ರಾಮೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರೀಶ್, ಯಮುನಾ ರಂಗೇಗೌಡ, ಸುವರ್ಣಾ ನಾಗರಾಜ್, ಹೆಚ್.ಸಿ.ಯೋಗೇಶ್, ಕೆ.ರಂಗನಾಥ್, ಚಂದ್ರಭೂಪಾಲ್, ಎನ್‍.ಡಿ.ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಪ್ರತಿಭನೆಟಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment