ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 30 ಜೂನ್ 2022
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಹತ್ಯೆ (Kanhaiya Lal Murder) ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾವೀರ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಅಮಾಯಕ ಹಿಂದೂ ಟೈಲರ್ ಕನ್ನಯ್ಯಲಾಲ್ (Kanhaiya Lal Murder) ಎಂಬುವವರನ್ನು ಮುಸ್ಲಿಂ ಜಿಹಾದಿ ಮಾನಸಿಕತೆ ಹೊಂದಿರವು ಭಯೋತ್ಪಾದಕರಾದ ಮಹಮದ್ ರಿಯಾಜ್ ಮತ್ತು ಮಹಮದ್ ಗೌಸ್ ಹತ್ಯೆ ಮಾಡಿದ್ದಾರೆ. ಕೋಮು ಭಾವನೆ ಕೆರಳಿಸುವ ದುರುದ್ದೇಶ, ಹಿಂದೂ ಸಮಾಜವನ್ನು ಭಯಭೀತಿಗೊಳಿಸುವ ದೃಷ್ಟಿಯಿಂದ ಕೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆಗಾರರನ್ನು ಉಗ್ರ ಶಿಕ್ಷೆಗೆ ಒಳಪಡಿಸಬೇಕು. ಪ್ರಕರಣದ ಹಿಂದೆ ಅಡಗಿರುವ ಶಕ್ತಿಗಳಿಗೂ ತಕ್ಕ ಪಾಠ ಕಲಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ್, ಕಾರ್ಯದರ್ಶಿ ನಾರಾಯಣ ವರ್ಣೇಕರ್, ರಾಜೇಶ್, ನಗರಾಧ್ಯಕ್ಷ ಸತೀಶ್ ಮುಂಚೆಮನೆ, ನಗರ ಕಾರ್ಯದರ್ಶಿ ಸುಧಾಕರ್, ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ಗೌಡ, ನಗರ ಸಂಚಾಲಕ ಅಂಕುಶ್, ವಿ.ಗುರುರಾಜ್, ಹೆಚ್.ಸಿ.ಪವನ್ಕುಮಾರ್, ವಿ.ರಾಜೇಶ್, ಪಿ.ಉಲ್ಲಾಸ್, ಕಾಂತರಾಜ್, ವಿಜಯ್ ಇನ್ನಿತರರು ಭಾಗವಹಿಸಿದ್ದರು.
ಇದನ್ನೂ ಓದಿ – ಸಕ್ರೆಬೈಲಿನಿಂದ 6 ಕಿ.ಮೀ ಸ್ವಚ್ಛತೆ, ವಿನಯ್ ಗುರೂಜಿ, ಡಾ.ಸರ್ಜಿ ನೇತೃತ್ವದಲ್ಲಿ ಅಭಿಯಾನ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422