ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಶ್ಮೀರದ ಪೆಹಾಲ್ಗಾಮ್‌ನಲ್ಲಿ ಅಟ್ಟಹಾಸ ಮೆರೆದ ಉಗ್ರರ (terrorist) ವಿರುದ್ಧ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಉಗ್ರರು, ಉಗ್ರಗಾಮಿಗಳಿಗೆ ಪ್ರಚೋದನೆ ನೀಡುವವರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಳಗ್ಗೆಯಿಂದ ವಿವಿಧ ಸಂಘಟನೆಗಳು ಸಾಲು ಸಾಲು ಪ್ರತಿಭಟನೆ ನಡೆಸಿವೆ. ಪೆಹಾಲ್ಗಾಮ್‌ನಲ್ಲಿ ಉಗ್ರರ (terrorist) ಗುಂಡಿಗೆ ಹತರಾದವರಿಗೆ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥನೆ ಸಲ್ಲಿಸಿದರು.

ಎಲ್ಲೆಲ್ಲಿ ಯಾರೆಲ್ಲ ಪ್ರತಿಭಟನೆ ನಡೆಸಿದರು?

ಮುಸ್ಲಿಂ ಸಮುದಾಯದಿಂದ ಆಕ್ರೋಶ

ಶಿವಮೊಗ್ಗ : ಕಾಶ್ಮೀರದಲ್ಲಿನ ದಾಳಿ ಖಂಡಿಸಿ ಸುನ್ನಿ ಮರ್ಕಜಿ ಜಾಮಿಯಾ ಮಸೀದಿ ವತಿಯಿಂದ ಮುಸ್ಲಿಂ ಸಮುದಾದವರು ಪ್ರತಿಭಟನೆ ನಡೆಸಿದರು. ಭಯೋತ್ಪಾದಕರ (terrorist) ವಿರುದ್ಧ ಘೋಷಣೆ ಕೂಗಿದ ಮುಸ್ಲಿಂ ಸಮುದಾಯದವರು ಬಳಿಕ ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದರು. ಮಸೀದಿ ಕಮಿಟಿ ಅಧ್ಯಕ್ಷ ಶೇಖ್‌ ಮುನಾವರ್‌, ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲೀಂ ಪಾಷ, ಮುಫ್ತಿ ಗುಲಾಂ ಬರ್ಕಾತಿ, ಮೌಲಾನಾ ಹಬೀಬ್‌ ಸಹಾಬಿ ಸೇರಿದಂತೆ ಹಲವರು ಇದ್ದರು.

Protest against Kashmir terrorist attack

ಇದನ್ನೂ ಓದಿ » ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್

ವಕೀಲರ ಸಂಘದಿಂದ ಆಕ್ರೋಶ

ಶಿವಮೊಗ್ಗ : ಕಾಶ್ಮೀರದಲ್ಲಿನ ಉಗ್ರರ ಕೃತ್ಯ ಖಂಡಿಸಿ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪಹಾಲ್ಗಾಮ್‌ ದಾಳಿ ಮನುಕುಲವೆ ತಲೆತಗ್ಗಿಸುವಂತದ್ದು. ಉಗ್ರರ ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕು. ಅವರನ್ನು ಬೆಂಬಲಿಸುವವರನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದರು. ವಕೀಲರ ಸಂಘದ ಜಿಲ್ಲಾಧ್ಯಕ್ಷ ಜಿ.ಆರ್.‌ರಾಘವೇಂದ್ರ ಸ್ವಾಮಿ, ಪ್ರಮುಖರಾದ ಎಸ್‌.ಎ.ಶ್ರೀನಿವಾಸ್‌, ಎಂ.ಬಿ.ಮಾಲತೇಶ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

Protest against Kashmir terrorist attack

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್‌ ಮನೆ ಸುತ್ತಲು ಬ್ಯಾರಿಕೇಡ್‌, ಪೊಲೀಸ್‌ ಬಂದೋಬಸ್ತ್‌

ಸರ್ವಧರ್ಮ ಗುರುಗಳ ನೇತೃತ್ವದಲ್ಲಿ ಶ್ರದ್ಧಾಂಜಲಿ

ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತರಾದವರಿಗೆ ಶಾಂತಿಗಾಗಿ ನಡಿಗೆ ಸಂಘಟನೆ ವತಿಯಿಂದ ಗೋಪಿ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸರ್ವಧರ್ಮದ ಧರ್ಮಗುರುಗಳ ನೇತೃತ್ವದಲ್ಲಿ ಕ್ಯಾಂಡಲ್‌ ಬೆಳಗಿ ಮೌನಾಚರಣೆ ಮಾಡಲಾಯಿತು.

ಮನುಷ್ಯ ಹಕ್ಕಿಯಂತೆ ಹಾರುವಂತೆ ಕಲಿತಿದ್ದಾನೆ. ನೀರಿನಲ್ಲಿ ಮೀನಿನಂತೆ ಈಜಲು ಕಲಿತಿದ್ದಾನೆ. ಆದರೆ ಭೂಮಿ ಮೇಲೆ ಮನುಷ್ಯನಾಗಿ ಬದುಕುವುದನ್ನು ಮರೆತಿದ್ದಾನೆ. ಪಹಾಲ್ಗಾಮಾದಲ್ಲಿ ನಡೆದಿದ್ದು ಅತ್ಯಂತ ಹೇಯ ಕೃತ್ಯ.

ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬೆಕ್ಕಿನಕಲ್ಮಠ

Protest against Kashmir terrorist attack

ಮಾನವೀಯತೆ ಇಲ್ಲದವರು, ಧರ್ಮದ ಹೆಸರಿನಲ್ಲಿ ವಿಷ ಬೀಜ ಬಿತ್ತಿದವರು ಧರ್ಮ ವಿರೋಧಿಗಳು. ಧರ್ಮಾಂಧತೆಯಿಂದ ಅನೈತಿಕ ಚಟುವಟಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನಾವೆಲ್ಲ ಸೇರಿ ಸುಭದ್ರ ಭಾರತ ಕಟ್ಟಬೇಕಿದೆ.

ಶಾಹುಲ್ ಅಬ್ದುಲ್‌ ಹಮೀದ್‌, ಮೌಲ್ವಿ

Protest against Kashmir terrorist attack

ವೈಜ್ಞಾನಿಕವಾಗಿ ಪ್ರಗತಿ ಆಗುತ್ತಿರುವ ಸಂದರ್ಭ ಇಂತಹ ಅಮಾನವೀಯ ಕೃತ್ಯ ನಡೆಯುತ್ತಿರುವುದು ಖಂಡನೀಯ. ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳ ಪ್ರೇರಣೆ ಮೂಡಿಸಬೇಕು. ಆಗ ಮಾತ್ರ ಇಂತಹ ಕೃತ್ಯ ತಡೆಯಲು ಸಾಧ್ಯ.

ಫಾ. ಕ್ಲಿಫರ್ಡ್ ಪಿಂಟೋ, ಸನ್ನಿಧಿಯ ನಿರ್ದೇಶಕ

Protest against Kashmir terrorist attack

ದಯವಿಲ್ಲದ ಧರ್ಮ ಯಾವುದು? ಎಂದು ಬಸವಣ್ಣ ಕೇಳಿದ್ದರು. ಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರು ಇದೆಯಾ ಎಂದು ಪೂರ್ಣಚಂದ್ರ ತೇಜಸ್ವಿ ಕೇಳಿದ್ದರು. ಧರ್ಮದ ಹೆಸರಿನಲ್ಲಿ ಮನುಷ್ಯನನ್ನು ಕೊಲ್ಲುವಂತಾಗಿರುವುದು ನೀಚ ಕೃತ್ಯ.

ಡಾ. ಬಸವಮರುಳಸಿದ್ಧ ಸ್ವಾಮೀಜಿ, ಬಸವಕೇಂದ್ರ

ಮಡಿದವರಿಗೆ ಯುವ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ

ಶಿವಮೊಗ್ಗ : ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ನೇತೃತ್ವದಲ್ಲಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಶ್ರದ್ಧಾಂಜಲಿ ಸಭೆ ನಡೆಯಿತು. ಕ್ಯಾಂಡಲ್‌ ಹಚ್ಚಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮೌನಾಚರಣೆ ಮಾಡಿದರು. ಹೆಚ್.ಸಿ.ಯೋಗೇಶ್‌, ರಮೇಶ್‌ ಹೆಗ್ಡೆ, ವಿಜಯ್‌ ಕುಮಾರ್‌, ಶಿವಕುಮಾರ್, ಮಧುಸೂದನ್, ಚೇತನ್, ಅಕ್ಬರ್‌, ಇಮ್ರಾನ್‌ ಸೇರಿದಂತೆ ಹಲವರು ಇದ್ದರು.

Protest against Kashmir terrorist attack

ಯಾವ ಧರ್ಮಗಳು ಕೊಲ್ಲಲು ಹೇಳುವುದಿಲ್ಲ. ಕೊಲ್ಲುವವರಿಗೆ ಧರ್ಮವೇ ಇಲ್ಲ. ಮಾನವ ಸಮಾಜ ತಲೆತಗ್ಗಿಸುವಂತಹ ಹೇಯಕೃತ್ಯವಿದು. ಶಿವಮೊಗ್ಗದ ಮಂಜುನಾಥ್ ಕೂಡ ಬಲಿಯಾಗಿದ್ದಾರೆ. ಈ ಕುಟುಂಬದ ಜೊತೆ ನಾವಿರುತ್ತೇವೆ.

ಆರ್‌.ಪ್ರಸನ್ನ ಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

ಕರವೇ ಸಿಂಹ ಸೇನೆಯಿಂದ ಆಕ್ರೋಶ

ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಗೋಪಿ ವೃತ್ತದಲ್ಲಿ ಉಗ್ರರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರಾಜ್ಯಾಧ್ಯಕ್ಷ ಎಂ.ರವಿಪ್ರಸಾದ್, ಜಿಲ್ಲಾಧ್ಯಕ್ಷ ಮಧುಸೂದನ್, ಪ್ರಮುಖರಾದ ನಯಾಜ್, ಗೋಪಿ, ಕಿರಣ್, ವೆಂಕಟೇಶ್, ಶರತ್, ಜಯಕೀರ್ತಿ ಇದ್ದರು.

Protest against Kashmir terrorist attack

ಕರವೇ ಪ್ರತಿಭಟನೆ, ಶ್ರದ್ಧಾಂಜಲಿ

ಶಿವಮೊಗ್ಗ : ಭಯೋತ್ಪಾದಕರ ದಾಳಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Protest against Kashmir terrorist attack

ಎಸ್‌ಡಿಪಿಐನಿಂದ ಕ್ಯಾಂಡಲ್‌ ಮಾರ್ಚ್‌

ಶಿವಮೊಗ್ಗ : ಕಾಶ್ಮೀರದ ಉಗ್ರರ ದಾಳಿ ಖಂಡಿಸಿ ಎಸ್‌ಡಿಪಿಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸಂಜೆ ಕ್ಯಾಂಡಲ್‌ ಮಾರ್ಚ್‌ ಮಾಡಿ ಕಾಶ್ಮೀರದಲ್ಲಿ ಹತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Protest against Kashmir terrorist attack

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment