ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021
ಸಹ್ಯಾದ್ರಿ ಕಾಲೇಜು ಕ್ಯಾಂಪಸ್ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಭೆ ನಡೆಸಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಇವತ್ತು NSUI ಕಾರ್ಯಕರ್ತರು ಮುತ್ತಿಗೆ ಹಾಕಿ, ಘೋಷಣೆ ಕೂಗಿದರು.

ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಆದರೆ ಈ ಕೇಂದ್ರ ಸ್ಥಾಪನೆಯಿಂದ ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ ಎಂದು NSUI ಕಾರ್ಯಕರ್ತರು ಆರೋಪಿಸಿದರು.
ವಿಶೇಷ ಕ್ರೀಡಾ ತರಬೇತಿ ಕೇಂದ್ರದಿಂದ ಶೈಕ್ಷಣಿಕ ಚುಟುವಟಿಕೆಗೆ ತೊಂದರೆಯಾಗಲಿದೆ. ಆದ್ದರಿಂದ ಈ ಕೇಂದ್ರವನ್ನು ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಹೊರತು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಬಾಲಾಜಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ವಿಜಯ್, ಮುಖಂಡರಾದ ಮಧುಸೂದನ್, ವಿಶ್ವನಾಥ ಕಾಶಿ, ಪ್ರಮುಖರಾದ ವಿಜಯ್, ವಿನಯ್, ರವಿ, ಮನು, ಚಂದ್ರೋಜಿರಾವ್, ಆಲ್ವಿನ್, ಕಿರಣ್, ಸಂದೇಶ್, ಮಂಜು ಸೇರಿದಂತೆ ಹಲವರು ಇದ್ದರು.
ಕುಲಪತಿಗೆ ಮುತ್ತಿಗೆ ಹಾಕಿದ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






