ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ನಂತರ ನಡೆದ ಗಲಭೆ ಸಂಬಂಧ ಪೊಲೀಸರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಕೋಟೆ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಒಂದು ತಿಂಗಳ ಮೇಲೆ ಮೂರು ದಿನವಾಯ್ತು
ಕೋಟೆ ಠಾಣೆಯಲ್ಲಿ 10ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಗಲಭೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಭಜರಂಗದಳ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಕೋರರನ್ನು ಬಂಧಿಸದೆ, ಹಿಂದೂ ಸಂಘಟನೆ ಕಾರ್ಯಕರ್ತರ ವಿಚಾರಣೆ ನಡೆಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಠಾಣೆ ಎದುರು ಧರಣಿ, ಘೋಷಣೆ
ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕೋಟೆ ಠಾಣೆ ಮುಂಭಾಗ ಧರಣಿ ನಡೆಸಲಾಗುತ್ತಿದೆ. ಮಾಜಿ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ, ಭಜರಂಗದಳ ಮುಖಂಡ ದೀನದಯಾಳು ನೇತೃತ್ವದಲ್ಲಿ ಪ್ರತಿಭಟನೆ ನೆಡಸಲಾಗುತ್ತಿದೆ.
ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200