ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 13 DECEMBER 2024
ಶಿವಮೊಗ್ಗ : ಪಂಚಮಸಾಲಿ, ದೀಕ್ಷಾ ಮಲೆಗೌಡ-ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಪ್ರಹಾರ (Lati Charge) ನಡೆಸಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಶಿವಮೊಗ್ಗ ಶಾಖೆಯಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಲಾಯಿತು.
ಸ್ವತಃ ಹಿರಿಯ ಪೊಲೀಸ್ ಅಧಿಕಾರಿ ಆರ್.ಹಿತೇಂದ್ರ ಅವರು ಲಾಠಿ ಹಿಡಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಸರ್ಕಾರ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಕ್ಷಮೆ ಕೇಳಬೇಕು. ಹೋರಾಟಗಾರರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್ ಮಾರ್ಕೆಟ್‌ಗಳ ಟ್ರೆಂಡ್ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರಾದ ಹೆಚ್.ವಿ.ಮಹೇಶ್ವರಪ್ಪ, ಜಿ.ಮಾಲತೇಶಪ್ಪ, ಎನ್.ಎಸ್.ಕುಮಾರ್, ಕೆ.ಆರ್. ವೀರೇಶ್, ಮಂಜುನಾಥ್, ವಿಜಯಕುಮಾರ್, ನಂಜುಂಡಪ್ಪ, ಬಸವರಾಜಪ್ಪ, ವಿಶ್ವೇಶ್ವರಯ್ಯ, ಎಂ.ದೇವೇಂದ್ರಪ್ಪ, ಡಿ.ಆರ್.ಕೃಷ್ಣಪ್ಪ ಮೊದಲಾದವರು ಇದ್ದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





