ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರಿಗೆ ಅವಾಚ್ಯ ಶಬ್ದ ಬಳಸಿ ಅಗೌರವ ತೋರಿದ ಉಲ್ಲಾಳದ ಮಧುಗಿರಿ ಮೋದಿ ಎಂಬಾತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಸುನ್ನಿ ಜಾಮಿಯಾ ಮಸ್ಜಿದ್ ಸುನ್ನಿ ಜಮೈತುಲ್ ಉಲ್ಮ ಕಮಿಟಿ ವತಿಯಿಂದ ಪ್ರತಿಭಟನ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಮಿಟಿ ಸದಸ್ಯರು, ಮಧುಗಿರಿ ಮೋದಿ ಎಂಬಾತ ಫೇಸ್’ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಅವರ ಕುರಿತು ಅವಾಚ್ಯ ಶಬ್ದಗಳನ್ನು ಬಳಿಸಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಕಮಿಟಿ ಸದಸ್ಯರು ಮನವಿ ಸಲ್ಲಿಸಿದರು. ಇದಕ್ಕು ಮೊದಲು ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ಕಮಿಟಿಯ ಅಧ್ಯಕ್ಷ ಸತ್ತಾರ್ ಬೇಗ್, ಕಾರ್ಯದರ್ಶಿ ಏಜಾಜ್ ಪಾಷ, ಜಾಮಿಯ ಮಸೀದಿ ಮುಖಂಡರಾದ ಅಫ್ತಾಬ್ ಪರ್ವಿಜ್, ವಕೀಲರಾದ ಸೈಯದ್ ಲಿಯಾಖತ್, ನಯಾಜ್ ಅಹ್ಮದ್ ಖಾನ್, ಮುನಾವರ್ ಪಾಷಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]