ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 ಏಪ್ರಿಲ್ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಾ. ಬಾಬು ಜಗಜೀವನರಾಮ್ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ವೇದಿಕೆ ಮುಂಭಾಗ ಧರಣಿ ನಡೆಸಿದ ಘಟನೆ ನಡೆದಿದೆ.
ಶಿವಮೊಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಾಬು ಜಗಜೀವನರಾಮ್ ಅವರ 115ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿಯೆ ಸಚಿವರು, ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಕಾರಣವೇನು?
ಡಾ. ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿತ್ತು. ಆದರೆ ಒಂದೂವರೆ ಗಂಟೆ ಕಾದರೂ ಸಚಿವರು, ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರಲಿಲ್ಲ. ಇದು ದಲಿತ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಯೆ ಪ್ರತಿಭಟನೆ ನಡೆಸಿದರು. ವೇದಿಕೆ ಮುಂಭಾಗ ಧರಣಿ ಕುಳಿತರು.
ಪ್ರತಿಭಟನೆ ಬಳಿಕ ಕಾರ್ಯಕ್ರಮ
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳಿ ಅವರು ದಲಿತ ಸಂಘಟನೆ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು. ಆನಂತರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಗಣ್ಯರು ವೇದಿಕೆಗೆ ಆಗಮಿಸಿದರು. ಆ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200