ಶಿವಮೊಗ್ಗ ಲೈವ್.ಕಾಂ | SHIMOGA | 20 ನವೆಂಬರ್ 2019
ಕಾನೂನು ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಇವತ್ತೂ ಪ್ರತಿಭಟನೆ ನಡೆಯಿತು. ಹಾಲುಮತ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಚಿವ ಮಾಧುಸ್ವಾಮಿ ಅವರು ಶ್ರೀ ಈಶ್ವರಾನಂದ ಸ್ವಾಮೀಜಿ ಅವರಿಗೆ ಅಗೌರವ ತೋರಿದ್ದಾರೆ. ಈ ಕುರಿತು ಕುರುಬ ಸಮಾಜದವರು ಸಚಿವರನ್ನು ಪ್ರಶ್ನಿಸಿದಾಗ, ತನ್ನನ್ನು ತಾನು ಒಂದು ಸಮಾಜದ ನಾಯಕ ಎಂದು ಹೇಳಿದ್ದಾರೆ.
ಅಲ್ಲದೆ ಬೇರೆ ಸಮಾಜದ ಬಗ್ಗೆ ತನಗೆ ಆಸಕ್ತಿ ಇಲ್ಲ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕೂಡಲೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲಕರಿಗೆ ಮನವಿ ಸಲ್ಲಿಸಲಾಯಿತು. ಎಂ.ಈಶ್ವರಪ್ಪ ನವುಲೆ, ಲಿಂಗದಹಳ್ಳಿ ಹಾಲಪ್ಪ, ತಿಮ್ಮಪ್ಪ, ವಿಜಯಕುಮಾರ್, ದೊಡ್ಡಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]