ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022
ಶಾಸಕ ಅಶೋಕ್ ನಾಯ್ಕ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಆರೋಪಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕೋವಿಡ್ ನಿಯಮ ಉಲ್ಲಂಘಿಸಿ ಶಾಸಕ ಅಶೋಕ್ ನಾಯ್ಕ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಶಾಲೆಯಲ್ಲಿ ಫೌಂಡರ್ಸ್ ಡೇ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ. ಆದ್ದರಿಂದ ಶಾಸಕರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು NSUI ಕಾರ್ಯಕರ್ತರು ಆರೋಪಿಸಿದರು.
ಪ್ರಮುಖರಾದ ಚೇತನ್, ಮಧುಸೂದನ್, ರವಿಕುಮಾರ್, ವಿಕ್ರಂ, ಸುಹಾಸ್, ವಿಜಯಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.