‘ಇನ್ನೆಂದೂ ಅವರು ಚನಾವಣೆಗೆ ಸ್ಪರ್ಧಿಸಬಾರದು’, ಶಿವಮೊಗ್ಗದಲ್ಲಿ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 24 SEPTEMBER 2024 : ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಲಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಒಕ್ಕಲಿಗ, ದಲಿತ ಸಮುದಾಯಗಳು ಮತ್ತು ಮಹಿಳೆಯರ ಕುರಿತು ಶಾಸಕ ಮುನಿರತ್ನ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುನಿರತ್ನ ಅತ್ಯಾಚಾರ, ಹನಿಟ್ರ್ಯಾಪ್‌ ರೂವಾರಿಯಾಗಿದ್ದಾರೆ. ಗುತ್ತಿಗೆದಾರರನ್ನು ಶೋಷಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದರು.

ಮತ ಕೇಳುವಾಗ ಅಮ್ಮ, ಅಕ್ಕ ಅನ್ನುತ್ತಾರೆ

ಪ್ರತಿಭಟನೆಯಲ್ಲಿ ಮಾತನಾಡಿದ ಪಾಲಿಕೆ ಮಾಜಿ ಸದಸ್ಯೆ ಯಮುನಾ ರಂಗೇಗೌಡ, ಒಕ್ಕಲಿಗರು, ಮಹಿಳೆಯರ ಕುರಿತು ಅವಹೇಳನ ಮಾಡಿದ್ದಾರೆ. ಮತ ಕೇಳುವಾಗ ಅಮ್ಮ, ಅಕ್ಕ ಅನ್ನುತ್ತಾರೆ. ಆದರೆ ಈಗ ಅಶ್ಲೀಲವಾಗಿ ಮಾತನಾಡಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಮುಂದೆಂದೂ ಚುನಾವಣೆಗೆ ಸ್ಪರ್ಧೆ ಮಾಡದಂತೆ ಆಗಬೇಕು. ಒಕ್ಕಲಿಗ ಸಮುದಾಯಕ್ಕೆ, ಮಹಿಳೆಯರು ಮತ್ತು ದಲಿತ ಸಮುದಾಯಕ್ಕೆ ತಲೆ ಬಾಗಿ ಕ್ಷಮೆಯಾಚಿಸಬೇಕು.

vokkaliga-yuva-vedike-protest-in-Shimoga.

ಒಕ್ಕಲಿಗ ಯುವ ವೇದಿಕೆ ಅಧ್ಯಕ್ಷ ಚೇತನ್‌ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್‌ ಹೆಗ್ಡೆ, ಹರ್ಷಿತ್‌ ಗೌಡ, ರಘುಗೌಡ, ಮೋಹನ್‌, ವಿಜಯ್, ರಂಗೇಗೌಡ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment