ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಡ್ರಗ್ ಅಡಿಕ್ಟ್ ಹೇಳಿಕೆಗೆ ಆಕ್ರೋಶ
ರಾಹುಲ್ ಗಾಂಧಿ ಅವರು ಡ್ರಗ್ ಅಡಿಕ್ಟ್, ಡಗ್ಸ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿದರು.

ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಹೇಳಿಕೆ ಹಿಂಪಡೆಯಬೇಕು. ಸುಖಾಸುಮ್ಮನೆ ಆರೋಪ ಮಾಡುತ್ತಿರುವ ನಳೀನ್ ಕುಮಾರ್ ಕಟೀಲ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್’ನ ಕುಮಾರೇಶ್, ಎಂ.ರಾಹುಲ್, ಪುಷ್ಪಕ್ ಕುಮಾರ್ , ಯುವ ಕಾಂಗ್ರೆಸ್ ಮುಖಂಡ ಟಿವಿ ರಂಜಿತ್ , ತಂಗರಾಜ್ , ಮಸ್ತಾನ್, ವೆಂಕಟೇಶ್ ಕಲ್ಲೂರು ಭಾಸ್ಕರ್ , ಚರಣ್, ಶ್ರೀನಿವಾಸ್, ರಾಹುಲ್, ಪವನ್ ಇತರರು ಇದ್ದರು.

LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















