ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022

ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು.

ಜನರ ಮೇಲೆ ನಿತ್ಯ ಬರೆ

ಪ್ರತಿದಿನ ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಗುತ್ತಿದೆ. ಈ ಮೂಲಕ ದೇಶದ ಜನತೆಗೆ ದಿನನಿತ್ಯ ಬರೆ ಹಾಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದೇಶಕ್ಕೆ ಅಚ್ಚೇ ದಿನ್ ತರುತ್ತೇವೆಂದು ಹೇಳಿ ಈಗ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್, ರಸಗೊಬ್ಬರ, ಔಷಧಿ ದರ ಹೆಚ್ಚಳ ಮಾಡಲಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು  ಏರಿಕೆ ಮಾಡಿದೆ. ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ತೆರಿಗೆ ಹೊರೆಯನ್ನು ಹೇರಲಾಗುತ್ತಿದೆ ಎಂದು ಆರೋಪಿಸಿದರು.

Youth Congress Protest in Shimoga

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ.ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಹೆಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ. ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಮಾರ್ಟಿನ್, ಚಂದ್ರಕಲಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

Shimoga Nanjappa Hospital

Petrol – Diesel Price

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment