ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು.
ಜನರ ಮೇಲೆ ನಿತ್ಯ ಬರೆ
ಪ್ರತಿದಿನ ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಗುತ್ತಿದೆ. ಈ ಮೂಲಕ ದೇಶದ ಜನತೆಗೆ ದಿನನಿತ್ಯ ಬರೆ ಹಾಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೇಶಕ್ಕೆ ಅಚ್ಚೇ ದಿನ್ ತರುತ್ತೇವೆಂದು ಹೇಳಿ ಈಗ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್, ರಸಗೊಬ್ಬರ, ಔಷಧಿ ದರ ಹೆಚ್ಚಳ ಮಾಡಲಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿದೆ. ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ತೆರಿಗೆ ಹೊರೆಯನ್ನು ಹೇರಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ.ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಹೆಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ. ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಮಾರ್ಟಿನ್, ಚಂದ್ರಕಲಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
Petrol – Diesel Price
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200