ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2020
ಆನ್‍ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುವ ತಜ್ಞರ ಸಮಿತಿಯ ಶಿಫಾರಸಿಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ. ಆನ್‍ಲೈನ್ ಶಿಕ್ಷಣ ನೀಡುವ ಸರ್ಕಾರದ ಯೋಚನೆಯನ್ನು ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕರೋನಾದಿಂದಾಗಿ ಲಾಕ್‍ಡೌನ್ ಮಾಡಲಾಗಿತ್ತು. ಇದರಿಂದ ಜನ ದುಡಿಮೆ ಇಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಆನ್‍ಲೈನ್ ಶಿಕ್ಷಣ ನೀಡಲು ಸರ್ಕಾರ ಯೋಚಿಸಿದ್ದು, ಜನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಮನೆಯಲ್ಲಿರುವ ಮಕ್ಕಳಿಗೆ ಮೊಬೈಲ್ ಖರೀದಿಸಬೇಕು, ಕರೆನ್ಸಿ ಹಾಕಿಸಬೇಕಿದೆ. ಇದಕ್ಕೆ ಹಣ ಹೊಂದಿಸುವುದು ಕಷ್ಟವಾಗಲಿದೆ.
ಮೊಬೈಲ್ ಮತ್ತು ಲ್ಯಾಪ್‍ಟಾಪ್ ಕಂಪನಿಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ಈ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಐಎನ್‍ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ, ನಗರಾಧ್ಯಕ್ಷ ಅರ್ಜುನ್, ಸಂತೋಷ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]