SHIVAMOGGA LIVE NEWS | RUMMY | 1 ಜೂನ್ 2022
ಆನ್‌ಲೈನ್ ರಮ್ಮಿ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇತ್ತೀಚಿಗೆ ಆನ್‌ಲೈನ್‌ನಲ್ಲಿ ರಮ್ಮಿ ಗೇಮ್‌ಗಳು ಹೆಚ್ಚಾಗಿವೆ. ಇದು ಆನ್‌ಲೈನ್ ಜೂಜಿಗೆ ಸಮಾನವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ಪ್ರಭಾವ ಹೆಚ್ಚಾಗುತ್ತಿದೆ. ಆದ್ದರಿಂದ ಯುವ ಪೀಳಿಗೆ ಗೇಮ್ ಮೊರೆ ಹೋಗುತ್ತಿದೆ. ಇದು ಆರ್ಥಿಕ ನಷ್ಟವನ್ನುಂಟು ಮಾಡುವುದರ ಜೊತೆಗೆ ಯುವ ಪೀಳಿಗೆಗೆ ಚಟವಾಗಿ ಪರಿಣಮಿಸಿದೆ ಎಂದರು.
ಈ ಗೇಮ್‌ನಿಂದಾಗಿ ಯುವ ಪೀಳಿಗೆ ದಾರಿ ತಪ್ಪುತ್ತಿದೆ. ಇಂತಹ ಗೇಮ್‌ಗಳ ಮುಖಾಂತರ ಆಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಇಂತಹ ಅಪಾಯಕಾರಿ ಜೂಜು ನಿಷೇಧಿಸಬೇಕು ಎಂದು ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ವಿನೋದ್, ಉಷಾ ಉತ್ತಪ್ಪ ಮತ್ತಿತರರು ಇದ್ದರು.
ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ಧರೆಗುರುಳಿದ ಮರ, ಕೆಲಕಾಲ ಟ್ರಾಫಿಕ್ ಜಾಮ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.