ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲದ ಕಡಿಮೆ ಇದ್ದರೂ, ಸುಂಕ ಹೆಚ್ಚಿಸಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೆಟ್ರೋಲ್, ಡೀಸೆಲ್ ಬೆಲೆ ಹತ್ತು ದಿನದಿಂದ ಸತತವಾಗಿ ಏರಿಕೆಯಾಗುತ್ತಿದೆ. ಸ್ವಾವಲಂಬಿ ಬದುಕು ಕುಟ್ಟಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಕರೆ ನೀಡುತ್ತಾರೆ. ಆದರೆ ತೈಲೋತ್ಪನ್ನಗಳ ಬೆಲೆ ಏರಿಕೆಗೆ ಮಾಡಿ, ಜನರಲ್ಲಿ ಆತಂಕ ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈಗಾಗಲೇ ಕರೋನ ಲಾಕ್‍ಡೌನ್‍ನಿಂದ ಜನರು ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇದರಿಂದ ಜನರು ಮತ್ತಷ್ಟು ಸಂಕಷ್ಟಕ್ಕೀಡಾಗುತ್ತಾರೆ. ಕೂಡಲೇ ಇಂಧನದ ಬೆಲೆ ಇಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಪ್ರವೀಣ್ ಕುಮಾರ್, ನಗರಾಧ್ಯಕ್ಷ ಹೆಚ್.ಪಿ.ಗಿರೀಶ್, ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಜಿಲ್ಲಾ ಉಪಾಧ್ಯಕ್ಷ ಡಿ.ಆರ್.ಗಿರೀಶ್, ಶರವಣ, ನಗರ ಉಪಾಧ್ಯಕ್ಷ ಕುಮರೇಶ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]