ಶಿವಮೊಗ್ಗದಲ್ಲಿ ಶಾಸಕ ಚನ್ನಬಸಪ್ಪ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JUNE 2024

SHIMOGA : ಪೆಟ್ರೋಲ್‌, ಡಿಸೇಲ್‌ ದರ ಏರಿಕೆ (Price) ಖಂಡಿಸಿ ಬಿಜೆಪಿ ವತಿಯಿಂದ ಖಾಸಗಿ ಬಸ್‌ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಶಾಸಕ ಚನ್ನಬಸಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ಗ್ಯಾರಂಟಿ ಆಶ್ವಾಸನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು ತಿಂಗಳಿಂದ ಗ್ಯಾರಂಟಿ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಈಗ ಪೆಟ್ರೊಲ್‌, ಡಿಸೆಲ್‌ ದರ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶೋಕ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವರನ್ನು ವಶಪಡಿಸಿಕೊಂಡಿರು.

ಪ್ರಮುಖರಾದ ಎಸ್‌.ಜ್ಞಾನೇಶ್ವರ್‌, ಅನಿತಾ ರವಿಶಂಕರ್‌, ಸುರೇಖಾ ಮುರಳೀಧರ್‌, ರಾಹುಲ್‌ ಬಿದರೆ, ಮಾಲತೇಶ್‌, ಮಂಜುನಾಥ್‌, ವಿಶ್ವನಾಥ್‌, ದಿನೇಶ್‌, ಕಿರಣ್‌ ಸೇರಿದಂತೆ  ಹಲವರು ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟ ದರ್ಶನ್‌ ವಿರುದ್ಧ ಆಕ್ರೋಶ, ವೀರಶೈವ ಸಮಾಜದಿಂದ ಹೋರಾಟ, ಯಾರೆಲ್ಲ ಏನೇನು ಹೇಳಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment