ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 OCTOBER 2023
SHIMOGA : ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ರಾಜಕೀಯ ಪ್ರೇರಿತ (Politically Motivated) ಎಂದು ಆರೋಪಿಸಿ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜನಪರ ಹೋರಾಟ ಸಮಿತಿ ಕಾರ್ಯಕರ್ತರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ವರ್ಚಸ್ಸು ಸಹಿಸದೆ ಬಿಜೆಪಿ ನಾಯಕರು ದುರುದ್ದೇಶದಿಂದ ವಿವಿಧ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆಪಾದಿಸಿದರು.
ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಈ ಹಿಂದೆ ಸಿಒಡಿ ತನಿಖೆ ನಡೆಸಲಾಗಿತ್ತು. ಅವ್ಯವಹಾರದಲ್ಲಿ ಆರ್.ಎಂ.ಮಂಜುನಾಥಗೌಡ ಪಾತ್ರವಿಲ್ಲ ಎಂದು ಸಿಒಡಿ ಅಧಿಕಾರಿಗಳು ಕ್ಲೀನ್ ಚಿಟ್ ನೀಡಿದ್ದರು. ಹಾಗಿದ್ದೂ ಈಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿ ಎಂದು ಆಪಾದಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ – ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















