ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
SHIVAMOGGA LIVE NEWS | 6 OCTOBER 2023
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

SHIMOGA : ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ರಾಜಕೀಯ ಪ್ರೇರಿತ (Politically Motivated) ಎಂದು ಆರೋಪಿಸಿ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜನಪರ ಹೋರಾಟ ಸಮಿತಿ ಕಾರ್ಯಕರ್ತರು, ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ವರ್ಚಸ್ಸು ಸಹಿಸದೆ ಬಿಜೆಪಿ ನಾಯಕರು ದುರುದ್ದೇಶದಿಂದ ವಿವಿಧ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆಪಾದಿಸಿದರು.

ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಈ ಹಿಂದೆ ಸಿಒಡಿ ತನಿಖೆ ನಡೆಸಲಾಗಿತ್ತು. ಅವ್ಯವಹಾರದಲ್ಲಿ ಆರ್‌.ಎಂ.ಮಂಜುನಾಥಗೌಡ ಪಾತ್ರವಿಲ್ಲ ಎಂದು ಸಿಒಡಿ ಅಧಿಕಾರಿಗಳು ಕ್ಲೀನ್‌ ಚಿಟ್‌ ನೀಡಿದ್ದರು. ಹಾಗಿದ್ದೂ ಈಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿ ಎಂದು ಆಪಾದಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ – ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!