ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 12 NOVEMBER 2024 : ಹಳ್ಳಗುಂಡಿಗಳಿಂದ ಹದಗೆಟ್ಟ ರಸ್ತೆ, ಧೂಳುಮಯ ವಾತಾವರಣ, ಕಂಗೆಟ್ಟ ಜನರು ಇವತ್ತು ರಸ್ತೆ ತಡೆ ಮಾಡಿ ಪ್ರತಿಭಟನೆ (PROTEST) ನಡೆಸಿದರು. ಹೊನ್ನಾಳಿ ರಸ್ತೆಯಲ್ಲಿರುವ ಶಿವಮೊಗ್ಗ ರೈಲ್ವೆ ಮೇಲ್ಸೇತುವೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಶೇಷಾದ್ರಿಪುರಂ ರೈಲ್ವೆ ಮೇಲ್ಸೇತುವೆ ಮತ್ತು ರಾಗಿಗುಡ್ಡಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸವಾರರು ವಾಹನ ಚಲಾಯಿಸಲು ಹರಸಾಹಸ ಪಡಬೇಕಾಗಿದೆ. ಸ್ಥಳೀಯರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಧೂಳಿನಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶಿವಮೊಗ್ಗ – ಹೊನ್ನಾಳಿ ಹೆದ್ದಾರಿ ತಡೆದು ಸ್ಥಳೀಯರು ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Protest-against-pot-holes-on-railway-station-flyover.

ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್‌

ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಪ್ರತಿಭಟನಾಕಾರರ ಮನವಿ ಆಲಿಸಿದರು. ಅಲ್ಲದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕೂಡಲೆ ರಸ್ತೆ ರಿಪೇರಿ ಮಾಡಿಸುವಂತೆ ಸೂಚನೆ ನೀಡಿದರು.

ಪ್ರಮುಖರಾದ ಎಸ್‌.ಎಂ.ಮಧುಸೂದನ್‌, ಎಂ.ರವಿಪ್ರಸಾದ್‌, ನಯಾಜ್‌, ಕಿಶೋರ್‌, ನೂರುಲ್ಲಾ, ರಘು, ಅನಿಲ್‌ ಕುಮಾರ್‌, ಶರತ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಸಿಗಂದೂರು ಲಾಂಚ್‌, ಹೊಳೆಬಾಗಿಲಲ್ಲಿ ರೈತರಿಂದ ಪ್ರತಿಭಟನೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment