SHIVAMOGGA LIVE NEWS | 19 DECEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಬೇಕು. ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸ್ಮೋಕ್ ಬಾಂಬ್ ಪ್ರಕರಣದ ಆರೋಪಿ ಮನೋರಂಜನ್‌ಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ್ದರು. ಈ ಹಿನ್ನೆಲೆ ಅವರನ್ನು ಬಂಧಿಸಬೇಕು. ಪ್ರಕರಣದ ಕುರಿತು ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಅಮಿತ್ ಷಾ, ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಬೆಂಕಿ
ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತ್ ಷಾ, ಸಂಸದ ಪ್ರತಾಪ್ ಸಿಂಹ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ಎನ್.ರಮೇಶ್, ಚಂದ್ರ ಭೂಪಾಲ್, ಸೌಗಂಧಿಕ, ಹೆಚ್.ಪಿ.ಗಿರೀಶ್, ಇಸ್ಮಾಯಿಲ್ ಖಾನ್, ಕೆ.ರಂಗನಾಥ್, ಶಿ.ಜು.ಪಾಶಾ, ಎಂ.ಪ್ರವೀಣ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.



ಇದನ್ನೂ ಓದಿ – ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






