ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಹೈದರಾಬಾದ್’ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ವಿಧಿಸಬೇಕು. ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಪ್ಪಿಸಲು ಓಬವ್ವ ಪಡೆಯನ್ನು ಬಿಗಿಗೊಳಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಹೈದರಾಬಾದ್’ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಬೇಕು. ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.
ಇತ್ತ ಶಿವಮೊಗ್ಗದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಓಬವ್ವ ಪಡೆ ನಿಯೋಜಿಸಲಾಗಿದೆ. ಇದನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಂಶಿತ್, ಗಣೇಶ್, ಅಭಿತ್, ಗೌತಮ್, ಗಗನ್, ಅಶ್ವಿನ್ ಎಂ.ನಾಯಕ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






