ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಕ್ಕೊತ್ತಾಯಗಳು ಹೆಚ್ಚುತ್ತಿವೆ.
‘ಗೃಹ ಸಚಿವರು ರಾಜೀನಾಮೆ ನೀಡಲಿ’
ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ NSUI ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
NSUI ರಾಜ್ಯ ಕಾರ್ಯದರ್ಶಿ ಬಾಲಾಜಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿ, ಪ್ರಮೋದ್, ಚಂದ್ರೋಜಿ ರಾವ್, ರವಿ, ಸಂಜು, ವೆಂಕಟೇಶ್, ನರೇಂದ್ರ, ಅಂಕುಶ್, ಸಾಗರ್, ಅಭಿ, ರಾಕೇಶ್, ಅನಿಲ್ ಆಚಾರ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಗರಾಧ್ಯಕ್ಷ ಮೊಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಭರತ, ಅಬ್ದುಲ್ ಸೇರಿ ಹಲವರು ಇದ್ದರು.
ಉಗ್ರ ಕ್ರಮಕ್ಕೆ ಆಗ್ರಹ
ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಚಾಮುಂಡಿ ಬೆಟ್ಟದ ತಪ್ಪಲಲ್ಲಿ ನಡೆದ ಘಟನೆ ಇಡೀ ಮನುಕುಲವೆ ತಲೆತಗ್ಗಿಸುವಂತದ್ದು. ಆರೋಪಿಗಳನ್ನು ಬಂಧಿಸಿ, ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಸುರೇಖಾ ಮುರಳೀಧರ್, ಪ್ರಧಾನ ಕಾರ್ಯದರ್ಶಿ ರಶ್ಮೀ ಶ್ರೀನಿವಾಸ್, ಆರತಿ ಪ್ರಕಾಶ್ ಸೇರಿದಂತೆ ಹಲವರು ಇದ್ದರು.
ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡಿ
ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಕೊಡಬೇಕು ಅಥವಾ ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡಬೇಕು ಎಂದು ಭಾರತೀಯ ಮಜ್ದೂರ್ ಕಾಂಗ್ರೆಸ್ ಮುಖ್ಯಮಂತ್ರಿ ಅವರಿಗೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವತ್ತ ಸರ್ಕಾರ ಗಮನವಹಿಸಬೇಕು. ರಸ್ತೆಗಳಲ್ಲಿ ವಾಹನ ತಪಾಸಣೆಗೆ ತೋರಿಸುವ ಮುತುವರ್ಜಿಯನ್ನು ಮಹಿಳೆಯರ ರಕ್ಷಣೆಯತ್ತಲೂ ಸರ್ಕಾರ ಗಮನ ವಹಿಸಬೆಕು ಎಂದು ಆಗ್ರಹಿಸಿದರು. ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರ್ಜುನ್, ವಿದ್ಯಾರ್ಥಿ ಜಿಲ್ಲಾಧ್ಯಕ್ಷ ನಿಹಾಲ್ ಸಿಂಗ್, ನಗರಾಧ್ಯಕ್ಷ ವಿಶಾಲ್ ಗುಜ್ಜಾರ್ ಸೇರಿದಂತೆ ಹಲವರು ಇದ್ದರು.
ಇನ್ಮುಂದೆ ಇಂತಹ ಘಟನೆಗಳಾಗಬಾರದು
ರಾಜ್ಯದಲ್ಲಿ ಇನ್ಮುಂದೆ ಇಂತಹ ಘಟನೆಗಳಾಗದ ಹಾಗೆ ನೋಡಿಕೊಳ್ಳಬೇಕು. ಮೈಸೂರಿನಲ್ಲಿ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಬೇಕು. ಅಲ್ಲದೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಶಿವಮೊಗ್ಗ ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200