ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಒಂದೆಡೆ ಅಧ್ಯಕ್ಷ ವಿರುದ್ಧ ತಾಲೂಕು ಪಂಚಾಯಿತಿ ಸದಸ್ಯರು ದೂರು ನೀಡಿದರೆ, ಇತ್ತ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಅಧ್ಯಕ್ಷರು ಕಂಪ್ಲೇಂಟ್ ನೀಡಿದ್ದಾರೆ. ಇದರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಇವತ್ತು ಕೆಲಕಾಲ ಗೊಂದಲ ನಿರ್ಮಾಣಾಯಿತು.
ಗೇಟ್ ಮುಂದೇನೆ ಧರಣಿ
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಗೇಟ್ನ ಒಳಗೆ ಕಾಲಿಡುತ್ತಿದ್ದಂತೆ ಮಾರ್ಗಕ್ಕೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದರು. ಸಾಗರ ತಾಲೂಕು ಪಂಚಾಯಿತಿ ಇಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷರ ಹಕ್ಕುಚ್ಯುತಿ ಆಗಿದೆ
ತಾಲೂಕು ಪಂಚಾಯಿತಿ ಇಒ ಅವರು ಯಾವುದೇ ಸೂಚನೆಗಳನ್ನು ಪಾಲಿಸುತ್ತಿಲ್ಲ. ಸಭೆ ನಡೆಸುವಂತೆ ಸೂಚಿಸಿದರೂ ಗಮನ ವಹಿಸುತ್ತಿಲ್ಲ. ಸಮಸ್ಯೆಗಳ ಕುರಿತು ದೂರು ನೀಡಿದರೂ ಗಮನ ಹರಿಸುತ್ತಿಲ್ಲ. ಇದರಿಂದ ಅಧ್ಯಕ್ಷರ ಹಕ್ಕಚ್ಯುತಿ ಆಗಿದೆ. ಈ ಸಂಬಂಧ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಮಲ್ಲಿಕಾರ್ಜುನ ಹಕ್ರೆ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರಿಗೆ ದೂರು ನೀಡಿದರು. ಇಒ ಅವರನ್ನು ಕೂಡಲೇ ಬದಲಾಯಿಸಿ ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಹಾಪ್ಕಾಮ್ಸ್ ಉಪಾಧ್ಯಕ್ಷ ವಿಜಯ್ ಕುಮಾರ್, ಪ್ರಮುಖರಾದ ತೀ.ನಾ.ಶ್ರೀನಿವಾಸ್, ರವಿಕುಮಾರ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]