ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಸಮೃದ್ದ ಜೀವನ್ ಮಲ್ಟಿಪರ್ಪಸ್ ಕೋ.ಆಪರೇಟಿವ್ ಸೊಸೈಟಿ ಹೂಡಿಕೆದಾರರಿಗೆ ಮೋಸ ಮಾಡಿದ್ದು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸನ್ಮಾರ್ಗ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗದ ಸಮೃದ್ಧ ಜೀವನ್ ಮಲ್ಟಿಪರ್ಪಸ್ ಕೋ.ಆಪರೇಟಿವ್ ಸೊಸೈಟಿ ಕಂಪೆನಿಯು ಕೋ.ಆಪರೇಟಿವ್ ಸೊಸೈಟಿ ಹೆಸರಿನಲ್ಲಿ ನಗರದಲ್ಲಿ ಕಾರ್ಯನಿರ್ವಹಿಸಿದ್ದು, ಪಿಗ್ಮಿ, ಆರ್ಡಿ, ಎಫ್ಡಿ ರೂಪದಲ್ಲಿ ಬಾಂಡ್ಗಳನ್ನು ನೀಡುವ ಮೂಲಕ ಸಾರ್ವಜನಿಕರಿಂದ ಲೀಡರ್ ಸಿಸ್ಟಮ್ ವ್ಯವಸ್ಥೆಯಡಿಯಲ್ಲಿ ಹಣ ಪಡೆಯಲಾಗಿದೆ ಎಂದರು.
ಕಂಪೆನಿ, ಕಚೇರಿ ಬಂದ್ ಆಗಿರುವುದರಿಂದ ನಗರದಲ್ಲಿ ಹೂಡಿಕೆದಾರರು ಆತಂಕಕ್ಕೆ ಒಳಗಾಗಿದ್ದಾರೆ. ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಂಡು ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಆಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನೇಕ ಕುಟುಂಬಗಳು ಬೀದಿಪಾಲಾಗಿವೆ. ಈ ಹಿನ್ನೆಲೆಯಲ್ಲಿ ಕಂಪೆನಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ವಂಚನೆಗೊಳಗಾದ ಹೂಡಿಕೆದಾರರ ಹಣ ಹಿಂತಿರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ವೇದಿಕೆ ಜಿಲ್ಲಾಧ್ಯಕ್ಷ ಯಾಸಿನುಲ್ಲಾ, ಪ್ರಧಾನ ಕಾರ್ಯದರ್ಶಿ ಮಹೇಶ್ ಪೂಜಾರ್, ಎಂ.ಅಶ್ರಫ್, ಬಷೀರ್ ಅಹಮ್ಮದ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Investors in Samrudda Jeevan Co Operative Society protest in front of Shimoga DC Office. Later the protesters submitted the memorandum to ADC Anuradha.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422