ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021
ರಾತ್ರೋರಾತ್ರಿ ಆಂಜನೇಯ ಸ್ವಾಮಿ ದೇವಸ್ಥಾನ ತೆರವಿಗೆ ಮುಂದಾದ ಸ್ಮಾರ್ಟ್ ಸಿಟಿ ಅಧಿಕಾರಿಗಳ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದ ದೊಡ್ಡಪೇಟೆ ಠಾಣೆ ಮುಂಭಾಗ, ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ದೇವಸ್ಥಾನ ತೆರವು ವಿಚಾರದಲ್ಲಿ ವಿವಾದ ಉಂಟಾಗಿದೆ.
ತೆರವು ಕಾರ್ಯಾಚರಣೆಗೆ ಕಾರಣವೇನು?
ಸಾಗರ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಲಾಗಿ ದೇವಸ್ಥಾನವಿದೆ. ರಸ್ತೆಗೆ ಅಡ್ಡಲಾಗಿ ದೇವಸ್ಥಾನಗಳಿದ್ದರೆ ಅವುಗಳನ್ನು ತೆರವು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ದೇಗುಲವನ್ನು ತೆರವು ಮಾಡಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ತಿಳಿಸಿದ್ದಾರೆ.
ರಾತ್ರೋರಾತ್ರಿ ಕಾರ್ಯಾಚರಣೆಗೆ ಮುಂದಾದರು
ಸ್ಮಾರ್ಟ್ ಸಿಟಿ ಅಧಿಕಾರಿಗಳು ರಾತ್ರೋರಾತ್ರಿ ದೇವಸ್ಥಾನ ತೆರವು ಕಾರ್ಯಾಚರಣೆ ಆರಂಭಿಸಿದ್ದರು. ದೇಗುಲದ ಅಭಿವೃದ್ಧಿದಾಗಿ ತರಿಸಲಾಗಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವಸ್ಥಾನ ನೆಲಸಮ ಮಾಡಲು ಜೆಸಿಬಿಗಳನ್ನು ತರಿಸಿದ್ದರು.
ಹಿಂದೂ ಸಂಘಟನೆಗಳಿಂದ ವಿರೋಧ
ದೇಗುಲ ತೆರವು ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಜಮಾಯಿಸಿದರು. ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಅಕ್ರಮ ಕಟ್ಟಡಗಳ ತೆರವು ಮಾಡುವಂತೆ ಕೋರ್ಟ್ ತೀರ್ಪು ನೀಡಿದೆ. ಮೊದಲು ಅವುಗಳನ್ನು ತೆರವು ಮಾಡಿ’ ಎಂದು ಅಧಿಕಾರಿಗಳಿಗೆ ಸವಾಲು ಹಾಕಿದರು.
ಬಜರಂಗದಳ ಮುಖಂಡ ದೀನದಯಾಳು ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು ಪ್ರಮುಖರೊಂದಿಗೆ ಸಭೆ ನಡೆಸಿ ದೇಗುಲದ ತೆರವು ಮಾಡಬೇಕೋ ಬೇಡವೋ ಅನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರಿಂದ, ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422