ಗೋಪಿ ಸರ್ಕಲ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್‌, ಸೌದೆ ಒಲೆ ಅಡುಗೆ

ಶಿವಮೊಗ್ಗ: ಕೇಂದ್ರ ಸರ್ಕಾರವು ಅಡುಗೆ ಅನಿಲ (Cylinder) ಹಾಗೂ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಸತತವಾಗಿ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಕೇಂದ್ರದ ಬಿಜೆಪಿ ಸರ್ಕಾರವು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯನ್ನು ಪದೇ ಪದೆ ಏರಿಕೆ ಮಾಡುತ್ತಿದೆ. ಈ ಮೂಲಕ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ₹60 ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹115 ಹೆಚ್ಚಿಸಿರುವುದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಭಾರಿ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Youth-Congress-Protest-against-LPG-Gas-cylinder-rate

ಇದನ್ನೂ ಓದಿ – ‌ಶಿವಮೊಗ್ಗದ ಸೂಳೆಬೈಲ್‌ ಮಹಿಳೆ ಅರೆಸ್ಟ್‌, ₹18,00,000 ಮೊತ್ತದ ಆಭರಣ ಸೀಜ್‌, ಏನಿದು ಕೇಸ್‌?

ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಒತ್ತಾಯ

ಬೆಲೆ ಏರಿಕೆಯ ಜನವಿರೋಧಿ ನಿರ್ಧಾರವನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು.. ಬೆಲೆ ಏರಿಕೆ ತಡೆಗೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

Youth-Congress-Protest-against-LPG-Gas-cylinder-rate

ಮೋದಿ, ಟ್ರಂಪ್‌ ಮತ್ತು ಸೌದೆ ಒಲೆ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಣತಿಯತೆ ನಡೆದುಕೊಳ್ಳುತ್ತಿದ್ದಾರೆ. ಪ್ರತಿ ವಿಷಯಕ್ಕು ಟ್ರಂಪ್‌ ಒಪ್ಪಿಗೆ ಪಡೆಯುತ್ತಿದ್ದಾರೆ ಎಂಬ ಅಣಕು ಪ್ರದರ್ಶನ ಮಾಡಿದರು. ಅಲ್ಲದೆ ಗೋಪಿ ವೃತ್ತದಲ್ಲಿ ಸೌದೆ ಒಲೆ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Youth-Congress-Protest-against-LPG-Gas-cylinder-rate

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್ ಜಿ. ಶೆಟ್ಟಿ, ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್‌ ಗೌಡ, ಪ್ರಮುಖರಾದ ಮುಧುಸೂದನ್‌ ಸೇರಿ ಹಲವರು ಪ್ರತಿಭಟನೆಯಲ್ಲಿ ಇದ್ದರು.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment