ಶಿವಮೊಗ್ಗ: ಆಪರೇಷನ್ ಸಿಂಧೂರ ಸಂದರ್ಭ ಪಾಕಿಸ್ತಾನಕ್ಕೆ ಡ್ರೋಣ್ ಪೂರೈಕೆ ಮಾಡಿದ ಟರ್ಕಿ ದೇಶದ ಕ್ರಮ ಖಂಡಿಸಿ, ಟರ್ಕಿ ಆ್ಯಪಲ್‌ಗಳಿಗೆ (Turkey Apple) ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿ ಟರ್ಕಿ ಆಪಲ್‌ಗಳನ್ನು ಸುಡಲಾಯಿತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಪರೇಷನ್ ಸಿಂಧೂರದ ಸಂದರ್ಭ ಪಾಕಿಸ್ತಾನಕ್ಕೆ ಟರ್ಕಿ ದೇಶ ಬೆಂಬಲವಾಗಿತ್ತು. ಪಾಕಿಸ್ತಾನಕ್ಕೆ ನೂರಾರು ಡ್ರೋಣ್‌ಗಳನ್ನು ಪೂರೈಕೆ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಇದನ್ನು ಖಂಡಿಸಿ ಟರ್ಕಿ ದೇಶದಿಂದ ಆಮದಾಗಿರುವ ಸೇಬು ಹಣ್ಣುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಯಿತು.
ಪ್ರಾಕೃತಿಕ ವಿಕೋಪದ ಸಂದರ್ಭ ಟರ್ಕಿ ದೇಶಕ್ಕೆ ಭಾರತ ನೆರವು ನೀಡಿತ್ತು. ನಮ್ಮ ದೇಶದಿಂದ ನೆರವು ಪಡೆದು ಈಗ ಟರ್ಕಿ ದೇಶ ವಂಚನೆ ಮಾಡಿದೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಪ್ರಮುಖರಾದ ಕಲ್ಲೂರು ಮೇಘರಾಜ್, ಹೆಚ್.ಎಂ.ಸಂಗಯ್ಯ, ಶಂಕ್ರನಾಯ್ಕ, ಕೆ.ಆರ್.ಶಿವಣ್ಣ, ಸೋಮಶೇಖರಯ್ಯ, ಟಿ.ಹೆಚ್.ಬಾಬು, ಗೋಪಲ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದ ಸೀಟುಗಳು ಲಭ್ಯ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200