ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಉತ್ತರ ಪ್ರದೇಶದಲ್ಲಿ ಹತ್ರಾಸ್ನಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಉತ್ತರ ಪ್ರದೇಶದ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತ ಯುವತಿ ಕುಟುಂಬಕ್ಕೆ ಅನ್ಯಾಯ ಮಾಡಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಶರವಣ, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಕೆಪಿಸಿಸಿ ಮುಖಂಡ ದೇವೇಂದ್ರಪ್ಪ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕಿರಣ್, ನಗರಾಧ್ಯಕ್ಷ ಗಿರೀಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






