ಶಿವಮೊಗ್ಗ ಲೈವ್.ಕಾಂ | SHIMOGA NEWS | 2 JUNE 2021
ಕರೋನ ಲಸಿಕೆಗಾಗಿ ಜನರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುತ್ತಿದ್ದಾರೆ. ಹೀಗಿದ್ದೂ ಹಲವರಿಗೆ ಲಸಿಕೆ ಸಿಗುತ್ತಿಲ್ಲ. ಆದರೆ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಸುಲಿಗೆ ಮಾಡಿ ವ್ಯಾಕ್ಸಿನ್ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್‍ಗೆ 700 ರೂ. ಕೋವ್ಯಾಕ್ಸಿನ್‍ಗೆ ಸಾವಿರ ರೂ.ಗಿಂತಲೂ ಹೆಚ್ಚಿಗೆ ಹಣ ಪಡೆಯುತ್ತಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸಿನ್, ಖಾಸಗಿ ಆಸ್ಪತ್ರೆಗೆಳು ಸಿಗುತ್ತಿರುವುದು ವಿಪರ್ಯಾಸ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ವ್ಯಾಕ್ಸಿನ್ ಪರಿಸ್ಥಿತಿ ಹೀಗಿದೆ. ಈ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗ ಲಸಿಕೆ ವಿತರಿಸಬೇಕು ಎಂದು ಆಗ್ರಹಿಸಿದರು.
ವ್ಯಾಕ್ಸಿನ್ ಮಾಹಿತಿ ವೈರಲ್
ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡುತ್ತಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಸಿಕೆಗೆ ಎಷ್ಟು ಮೊತ್ತ ನಿಗದಿಪಡಿಸಲಾಗಿದೆ ಎಂಬುದರ ಕುರಿತು ಮಾಹಿತಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರಿ ಅಸ್ಪತ್ರೆಗಳಲ್ಲಿ ಸಿಗದ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುತ್ತಿರುವುದು ಹೇಗೆ ಎಂದು ಪ್ರಶ್ನಿಸಿ, ವಿಡಿಯೋಗಳನ್ನು ಹರಿಬಿಡಲಾಗಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]