ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 AUGUST 2023
SHIMOGA : ಶಿಕ್ಷಣ ಸಂಸ್ಥೆಗಳು (Education Institution), ಧಾರ್ಮಿಕ ಶ್ರದ್ಧಾ ಕೇಂದ್ರದ ಸಮೀಪ ಬಾರ್ ಅಂಡ್ ರೆಸ್ಟೋರೆಂಟ್ (Bar and Restaurant) ತೆರೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ತೆರವು ಮಾಡಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗದ ಊರುಗಡೂರು ಸಮೀಪ ಬೈಪಾಸ್ ರಸ್ತೆಯಲ್ಲಿ (By Pass Road) ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ಸೂಳೆಬೈಲು ಮತ್ತು ಮದಾರಿಪಾಳ್ಯ ನಿವಾಸಿಗಳು ಪ್ರತಿಭಟನೆ ನಡೆಸಲಾಯಿತು. ಬಾರ್ ಸಮೀಪದಲ್ಲೇ ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಇದೆ. ಎರಡು ದೇವಸ್ಥಾನಗಳು ಮತ್ತು ಒಂದು ದರ್ಗಾ ಕೂಡ ಇದೆ ಎಂದು ಆರೋಪಿಸಿದರು. ಇವೆಲ್ಲವು 100 ಮೀಟರ್ ವ್ಯಾಪ್ತಿಯಲ್ಲಿವೆ. ಬಾರ್‌ನಿಂದಾಗಿ ವಿದ್ಯಾರ್ಥಿಗಳು, ಭಕ್ತರಿಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ಕೂಡಲೆ ಇದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಈ ಸಂಬಂಧ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬೇಡಿಕೆ ಈಡೇರದೆ ಇದ್ದರೆ ತೀವ್ರ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿತ್ತು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















