ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
PROTEST
ಶಿವಮೊಗ್ಗ: ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಜುಲೈ 18ರಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ (Protest) ನಡೆಸಲಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟ ಎಚ್ಚರಿಸಿದೆ.
ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷೆ ರುದ್ರಮ್ಮ, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಗೌರವಧನ ಹೆಚ್ಚಿಸಬೇಕು. ಅದನ್ನು ನೇರವಾಗಿ ತಮ್ಮ ಖಾತೆಗೆ ಜಮಾ ಮಾಡಬೇಕು. 2024ರ ಸೆ.2ರಂದು ಸರ್ಕಾರ ಹೊರಡಿಸಿರುವ ಆದೇಶ ಹಿಂಪಡೆಯಬೇಕು. ಆಡಳಿತ ಖರ್ಚಿಗಾಗಿ ವಾರ್ಷಿಕ ₹6 ಲಕ್ಷ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿದೆವು. ಸಚಿವರು, ಜನಪ್ರತಿನಿಧಿಗಳು ತಮ್ಮ ಮನವಿ ಆಲಿಸಲಿಲ್ಲ. ಈ ಹಿನ್ನೆಲೆ ವಿಧಾನಸೌಧದತ್ತ ತೆರಳುವಾಗ 200 ಮಹಿಳೆಯರನ್ನು ಸರ್ಕಾರ ಬಂಧಿಸಿತ್ತು. ಈಗ ಜುಲೈ 17ರಂದು ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದಲ್ಲಿ ಜಂಟಿ ಸಭೆ ಕರೆಯಲಾಗಿದೆ. ಇಲ್ಲಿ ತಮ್ಮ ಬೇಡಿಕೆ ಈಡೇರದೆ ಇದ್ದರೆ ಧರಣಿ ಮುಂದುವರೆಸಲಾಗುತ್ತದೆ ಎಂದು ರುದ್ರಮ್ಮ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಗೀತಾ, ಸುಮಾ ಇದ್ದರು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





