ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 DECEMBER 2023
SHIMOGA : ಜಿಲಾ ಪಂಚಾಯಿತಿ ಮಾಜಿ ಸದಸ್ಯರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಅವಕಾಶವಿದ್ದರೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಮೇಷ ಎಣಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ತಿಳಿಸಿದರೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಗೆ ಸಿಇಒ ಅವರು ಅಗೌರವ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ಉಂಟಾಗಿತ್ತು.
ಕಾರಿಗೆ ಅಡ್ಡ ಕುಳಿತ ಕಾರ್ಯಕರ್ತರು
ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಿಇಒ ಅವರಿಗೆ ಆಗ್ರಹಿಸಿದರು. ಆದರೆ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಸಮರ್ಪಕ ಉತ್ತರ ನೀಡಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಸಿಇಒ ಅವರು ಕಚೇರಿಯಿಂದ ಹೊರ ಬಂದು ಕಾರು ಹತ್ತಲು ಮುಂದಾದರು. ಆಗ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.
ಹಾಗಾಗಿ ತಮ್ಮ ಕಚೇರಿಯ ಮೀಟಿಂಗ್ ಚೇಂಬರ್‌ಗೆ ತರಳಿ ಬಾಗಿಲು ಬಂದ್ ಮಾಡಿಕೊಂಡರು. ಅವರ ಹಿಂದೆಯೇ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರು.
ಕಾಂಗ್ರೆಸಿಗರು ಹೇಳಿದ್ದೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಬೈಲಾ ಪ್ರಕಾರ ಸ್ಥಳೀಯ ಜನಪ್ರತಿನಿಧಿಗಳಿಗೆ ಅನುದಾನ ಹಂಚಿಕೆಗೆ ಅವಕಾಶವಿದೆ. ಆದರೆ ಸಿಇಒ ಅವರು ಒಮ್ಮೆ ಅನುದಾನ ಕೊಡುತ್ತೇನೆ ಎನ್ನುತ್ತಾರೆ. ಮತ್ತೊಮ್ಮೆ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸುತ್ತಿದ್ದಾರೆ. ಅನುದಾನ ಕೇಳಿದ ಜಿಲಾ ಪಂಚಾಯಿತಿ ಮಾಜಿ ಸದಸ್ಯರನ್ನು ನಿಂದಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರು ಅನುದಾನ ಬಿಡುಗಡೆಗೆ ಸೂಚಿಸಿದ್ದರೂ ಸಿಇಒ ಅವರು ಅದರಂತೆ ನಡೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಇಒ ಜೊತೆಗೆ ಸಭೆ
ಇನ್ನು, ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮತ್ತಷ್ಟು ಮುಖಂಡರು ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸಿ ಸಿಇಒ ಅವರ ಜೊತೆಗೆ ಸಭೆ ನಡೆಸಿದರು. ಪೊಲೀಸರು ಕೂಡ ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶಾಂತವೀರ ನಾಯ್ಕ್, ಗಿರೀಶ್, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್, ದೇವೇಂದ್ರಪ್ಪ, ಸೂಡೂರು ಶಿವಣ್ಣ ಸೇರಿದಂತೆ ಹಲವರು ಈ ಸಂದರ್ಭ ಹಾಜರಿದ್ದರು.

ಇದನ್ನೂ ಓದಿ – ರಸ್ತೆ ಅಪಘಾತ, ಶಾಸಕ ಸಂಗಮೇಶ್ವರ್ ಆಪ್ತ ಸಹಾಯಕ ಸಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















