ಶಿವಮೊಗ್ಗ ಲೈವ್.ಕಾಂ | SHIMOGA | 23 ನವೆಂಬರ್ 2019
ಕಲಬುರಗಿ ವಿಮಾನ ನಿಲ್ದಾಣದಕ್ಕೆ ಸಂತ ಸೇವಾಲಾಲ್ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಯುವಕರು ರಕ್ತದಲ್ಲಿ ಪತ್ರ ಬರೆದು, ಸಂತ ಸೇವಾಲಾಲ್ ಹೆಸರಿಡುವಂತೆ ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಪ್ಪನಾಯಕ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಂಜಾರ ಜನಾಂಗದ 769 ಎಕರೆ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಅಲ್ಲದೆ ವಿಮಾನ ನಿಲ್ದಾಣಕ್ಕಾಗಿ ಶ್ರೀ ಸೇವಾಲಾಲ್ ಮರಿಯಮ್ಮ ದೇವಸ್ಥಾನವನ್ನು ಧ್ವಂಸ ಮಾಡಲಾಗಿದೆ. ದೇವಾಲಯ ಧ್ವಂಸಕ್ಕೆ ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಅವರ ಹೆಸರಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Karnataka Banjara Students Union held a protest in Shimoga BH Road against the officers who ordered demolition of a Sevalal Temple. Protesters also wrote blood letter to CM urging to name Kalburgi airport in the name of Saint Sevalal.