ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 APRIL 2023
SHIMOGA : ಕಾಂಗ್ರೆಸ್ ಕಚೇರಿ ಮುಂದೆ ಇವತ್ತೂ ಪ್ರತಿಭಟನೆ (Protest) ನಡೆಯಿತು. ಟೈರ್ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆಗಳನ್ನು ಕೂಗಿ ತಮ್ಮ ಸಿಟ್ಟು ಹೊರ ಹಾಕಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ನಗರ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಟಿಕಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕಟ್ ಕೈ ತಪ್ಪಿದ್ದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಮುಂದೆ ಹಠಾತ್ ಜಮಾವಣೆಯಾದ ಬೆಂಬಲಿಗರು ಪ್ರತಿಭಟನೆ (Protest) ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಟೈರ್ಗೆ ಬೆಂಕಿ ಹಚ್ಚಿದರು
ಪ್ರತಿಭಟನೆ ವೇಳೆ ಮಾತನಾಡಿದ ದಕ್ಷಿಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಹಮತ್, ʼಸುಂದರೇಶ್ ಅವರಿಗೆ ಟಿಕೆಟ್ ಸಿಗುವ ಆಶಾಭಾವನೆ ಇತ್ತು. ಸಾಲು ಸಾಲು ಹೋರಾಟಗಳನ್ನು ಮಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಅವರಿಗೆ ಟಿಕೆಟ್ ಕೊಡದಿರುವುದು ಬೇಸರ ಮೂಡಿಸಿದೆ. ಕೆಪಿಸಿಸಿ ಮತ್ತು ಎಐಸಿಸಿ ಘಟಕ ಈ ಕೂಡಲೆ ಅಭ್ಯರ್ಥಿ ಬದಲಾವಣೆ ಮಾಡಬೇಕುʼ ಎಂದು ಆಗ್ರಹಿಸಿದರು.
ಇದನ್ನೂ ಓದಿ – ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈಶ್ವರಪ್ಪ, ಏನಿದೆ ಅದರಲ್ಲಿ?
ಇದೆ ವೇಳೆ ಕಾಂಗ್ರೆಸ್ ಕಚೇರಿ ಮುಂಭಾಗ ಟೈರ್ಗೆ ಬೆಂಕಿ ಹಚ್ಚಿದ ಸುಂದರೇಶ್ ಬೆಂಬಲಿಗರು ಘೋಷಣೆ ಕೂಗಿದರು.