ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 4 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು.

Shimoga Nanjappa Hospital

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮೇಯರ್ ಟೇಬಲ್ ಮುಂದೆ ಆಕ್ರೋಶ

ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಆಮೇಲೆ ಮೇಯರ್ ಟೇಬಲ್ ಮುಂಭಾಗ ಬಂದು ಘೋಷಣೆ ಕೂಗಿದರು. ಈ ಗದ್ದಲದ ನಡುವೆಯು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದರು.

ಭಿತ್ತ ಪತ್ರ ಹಿಡಿದು ಘೋಷಣೆ

ಕಳೆದ ಎರಡು ಅವಧಿ ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳ ಪಟ್ಟಿ ಮುದ್ರಿಸಿದ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಯಾವ ಯೋಜನೆಗಳನ್ನೂ ಜಾರಿಗೊಳಿಸಿಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ಕಾರ್ಪೊರೇಟರ್’ಗಳು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Palike Corporators Budget Session

Shimoga Palike Budget Session

Shimoga Palike Budget Session

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment