ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ರೈತರ ಆಗ್ರಹಗಳೇನು? ಇಲ್ಲಿದೆ ಕಪಾಯಿಂಟ್ಸ್

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಎಲ್ ನಿನೊ ಪರಿಣಾಮ ವಾಡಿಕೆಯಷ್ಟು ಮಳೆ ಆಗದೆ ಇಡೀ ರಾಜ್ಯ ಸಂಕಷ್ಟದಲ್ಲಿದ್ದು, ಬರಗಾಲದ ಛಾಯೆ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ದಿನಕ್ಕೆ 12 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕವಾಗಿದೆ. ಇದನ್ನು ಪಾಲನೆ ಮಾಡುವುದು ಕಷ್ಟಕರ.


ರಾಜ್ಯದಲ್ಲಿ ಕಾವೇರಿ ಕೊಳ್ಳದ ನೀರನ್ನು ಇಲ್ಲಿಯವರೆಗೂ ಕೃಷಿ ಉದ್ದೇಶಕ್ಕೆ ಬಿಡುಗಡೆ ಮಾಡಿಲ್ಲ ಮತ್ತು ಮುಂದಿನ ಮಳೆಗಾಲದವರೆಗೆ ಕುಡಿಯುವ ನೀರಿನ ಬೇಡಿಕೆಗೆ ಮಾತ್ರ ಇದು ಬಳಕೆಯಾಗಲಿದೆ. ಆದರೆ ತಮಿಳುನಾಡು ಬೆಳೆಗಾಗಿ ನೀರು ಕೇಳುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ತನ್ನ ಹಕ್ಕು ಉಳಿಸಿಕೊಳ್ಳಬೇಕು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಪಿ.ಶೇಖರಪ್ಪ, ಇ.ಬಿ. ಜಗದೀಶ್, ಕೆ.ರಾಘವೇಂದ್ರ, ಹಿಟ್ಟೂರು ರಾಜು, ಸಿ.ಬಿ.ಹನುಮಂತಪ್ಪ, ಜಿ.ಎನ್.ಪಂಚಾಕ್ಷರಿ, ಜ್ಞಾನೇಶ್ ಹಾಗೂ ಸಿ.ಚಂದ್ರಪ್ಪ ಉಪಸ್ಥಿತರಿದ್ದರು.