ಶಿವಮೊಗ್ಗ ಲೈವ್.ಕಾಂ | SHIMOGA | 7 ಮಾರ್ಚ್ 2020
ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯಕ್ಕೆ KSRTC ಬಸ್ ಸೇವೆ ನೀಡಬೇಕು ಎಂದು ಒತ್ತಾಯಿಸಿ NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
RTO ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕುವೆಂಪು ವಿಶ್ವವಿದ್ಯಾಲಯದ ಮಾರ್ಗದಲ್ಲಿ ಖಾಸಗಿ ಬಸ್’ಗಳೇ ಹೆಚ್ಚಾಗಿವೆ. ಈ ಮಾರ್ಗದಲ್ಲಿ KSRTC ಬಸ್ ಸೇವೆ ಆರಂಭಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ತಿಂಗಳು ಅಥವಾ ವಾರ್ಷಿಕ ಬಸ್ ಪಾಸ್ ಸಿಗಲಿದೆ. ಬಡ ವಿದ್ಯಾರ್ಥಿಗಳು ವಿವಿಗೆ ತೆರಳಲು ಅನುಕೂಲವಾಗಲಿದೆ ಎಂದರು.
ಒಂದು ವೇಳೆ ತಮ್ಮ ಬೇಡಿಕೆಗೆ ಮನ್ನಣೆ ನೀಡದಿದ್ದರೆ, ಕುವೆಂಪು ವಿಶ್ವವಿದ್ಯಾಲವನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು NSUI ರಾಜ್ಯ ಉಪಾಧ್ಯಕ್ಷ ಕೆ.ಶ್ರೀಜಿತ್ ಎಚ್ಚರಿಕೆ ನೀಡಿದರು.
ಬಳಿಕ ಸಾರಿಗೆ ಇಲಾಖೆ ಉಪ ಆಯುಕ್ತರ ಮೂಲಕ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿನಯ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]