ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 DECEMBER 2023
SHIMOGA : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಟ್ರಸ್ಟ್ ವತಿಯಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ (Shivamogga airport) ನಿರ್ಮಾಣವಾಗಿದೆ. ಅದಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವುದೆ ಸೂಕ್ತ. ಈ ಕುರಿತು ಹಲವು ಬಾರಿ ಮನವಿ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಇದನ್ನೂ ಓದಿ- ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್ ಏನು?
ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಎಸ್.ವಿ.ರಾಜಮ್ಮ, ಡಾ.ಶೇಖರ್ ಗೌಳೇರ್, ಮಂಜುನಾಥ ಪಾಟೀಲ್, ಡಾ. ನೇತ್ರಾವತಿ, ಜಿ.ಮಂಜುಳಾ, ಸುವರ್ಣ ನಾಗರಾಜ್ ಪ್ರತಿಭಟನೆಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422