ಭದ್ರಾವತಿ ನಗರಸಭೆಗೆ ಮೂರು ಕೋಟಿ ರೂ. ಕೊಡುವಂತೆ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021

ಕರೋನ ಸಂಕಷ್ಟದ ಹಿನ್ನೆಲೆಯಲ್ಲಿ ಭದ್ರಾವತಿ ನಗರಸಭೆಗೆ ವಿಶೇಷ ಅನುದಾನದಡಿ 3 ಕೋಟಿ ರೂ. ನೀಡಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್‍.ಗೌಡ ಏಕಾಂಗಿ ಹೋರಾಟ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಹೋರಾಟ ನಡೆಸಿದ ಶಶಿಕುಮಾರ್ ಗೌಡ, ಲಾಕ್‍ ಡೌನ್‍ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಭದ್ರಾವತಿಯಲ್ಲಿ 30ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಿವೆ. 25 ಸಾವಿರಕ್ಕೂ ಹೆಚ್ಚು ಜನ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಅನ್ನ ಭಾಗ್ಯದ ಅಕ್ಕಿ ಬಿಟ್ಟು ಬೇರೇನೂ ಸಿಕ್ಕಿಲ್ಲ ಎಂದು ಆರೋಪಿಸಿದರು.

ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ನೆರವು ನೀಡಬೇಕು ಭದ್ರಾವತಿ ನಗರಸಭೆಗೆ ವಿಶೇಷ ಅನುದಾನದ ಅಡಿಯಲ್ಲಿ 3 ಕೋಟಿ ರೂ. ನೀಡಬೇಕು ಎಂದು ಆಗ್ರಹಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

290621 Shashi Kumar Gowda Protest For Bhadaravathi Covid Relief 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment