ವರ್ಗಾವಣೆ ಪತ್ರ ನೀಡಲು ಖಾಸಗಿ ಶಾಲೆ ನಿರಾಕರಣೆ, ಡಿಸಿ ಕಚೇರಿ ಮುಂದೆ ಪೋಷಕರ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದುರ್ಗಿಗುಡಿ, ಶಾಲೆಯಲ್ಲಿ ವ್ಯಾಸಂಗ ಮುಂದುವರಿಸಲು ಬಯಸಿದ್ದು, ಖಾಸಗಿ ಶಾಲೆಯವರು ವರ್ಗಾವಣೆ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಶಾಲೆ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಖಾಸಗಿ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ತನ್ನ ಕುಟುಂಬದ ಆರ್ಥಿಕ ಸಮಸ್ಯೆಯಿಂದ ದುಬಾರಿ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ಶಾಲೆಗೆ ಸೇರಲು ಮುಂದಾಗಿದ್ದು ಶಾಲಾ ಆಡಳಿತ ಮಂಡಳಿ ವರ್ಗಾವಣೆ ಪತ್ರ ನೀಡದೆ ಸತಾಯಿಸುತ್ತಿದೆ ಎಂದು ದೂರಿದರು.

Nanjappa Hospital Advertisement

ಶಾಲೆಯ ಶುಲ್ಕವನ್ನು ಪೂರ್ಣ ಪಾವತಿಸದಿದ್ದರೆ ವರ್ಗಾವಣೆ ಪತ್ರ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಶೇ.70ರಷ್ಟು ಶುಲ್ಕ ಪಾವತಿಸಬೇಕೆಂದು ಸರ್ಕಾರವೇ ಆದೇಶ ನೀಡಿದೆ. ಆದರೂ ಈ ಶಾಲೆ ಆಡಳಿತ ಮಂಡಳಿಯವರು ಪೂರ್ಣ ಶುಲ್ಕ ಪಾವತಿಗೆ ಒತ್ತಾಯಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಚಾರವನ್ನು ಬಿಇಒ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗೆ ವರ್ಗಾವಣೆ ಪತ್ರ ಕೊಡಿಸಬೇಕೆಂದು ಆಗ್ರಹಿಸಿದರು.ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್‌ ಮಂಜುನಾಥ್, ಪ್ರಮುಖರಾದ ಸೋಮಶೇಖರ್, ಲೋಕೇಶ್, ಅಕ್ಬರ್ ಪಾಶಾ, ಸುರೇಂದ್ರ ಇದ್ದರು.

 (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment