ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಲವ್ ಜಿಹಾದ್ (love jihad) ತಡೆಯಲು ಪ್ರತ್ಯೇಕ ಪೊಲೀಸ್ ದಳ ಸ್ಥಾಪಿಸಬೇಕು, ಹಲಾಲ್ ಪ್ರಮಾಣ ಪತ್ರ ನಿಷೇಧಿಸಬೇಕು. ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿಯೇ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪ್ರೀತಿ-ಪ್ರೇಮದ (love jihad) ಹೆಸರಿನಲ್ಲಿ ಹಿಂದು ಹೆಣ್ಣು ಮಕ್ಕಳನ್ನು ಸಿಲುಕಿಸಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಲವ್ ಜಿಹಾದ್ ಸಮಸ್ಯೆ ಹೆಚ್ಚಾಗುತ್ತಿದೆ. ಮತಾಂತರ ನಿಷೇಧ ಕಾಯಿದೆ ಇದ್ದರು ಕೆಲವು ಮುಸ್ಲಿಂ ಸಂಘಟನೆಗಳು ಇದರಲ್ಲಿ ಭಾಗಿಯಾಗಿವೆ. ಇಂತಹ ಸಂಘಟನೆಗಳ ಮೇಲೆ ಕ್ರಮ ಜರುಗಿಸಿ ನಿಷೇಧ ಮಾಡಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಲವ್ ಜಿಹಾದ್ ತಡೆಗೆ ಪೊಲೀಸ್ ದಳ ಸ್ಥಾಪನೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದನ್ನೂ ಓದಿ – 14 ರೌಡಿಗಳ ಮನೆಗಳ ಮೇಲೆ ಪೊಲೀಸರಿಂದ ದಿಢೀರ್ ದಾಳಿ
ಸಾರ್ವಜನಿಕರು ಬಳಸುವ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಅನಧಿಕೃತವಾಗಿ ಹಲಾಲ್ ಲೋಗೋ ಮುದ್ರಿಸಲಾಗುತ್ತಿದೆ. ಇದರಿಂದ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಲಾಗುತ್ತಿದೆ. ಇದೇ ಹಣ ದೇಶವಿರೋಧಿ ಚಟುವಟಿಕೆಗೆ ಉಪಯೋಗವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
ಪ್ರತಿಭಟನೆಯಲ್ಲಿ ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ವಿಜಯ ರೇವಣ್ಕರ, ವಾಗೀಶ್, ವಿಶ್ವನಾಥ್, ಮುಕುಂದ, ಪ್ರದಿಪ್, ಶೆಲ್ವಿ, ಸುಧಾ ಕಾಮತ್, ಸುನೀತಾ, ಸೀಮಾ, ಶ್ರೀಧರ್ ಮುಂತಾದವರಿದ್ದರು.