SHIVAMOGGA LIVE NEWS | SHIMOGA | 13 ಏಪ್ರಿಲ್ 2022
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರು ಯಾವುದೆ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ರಾಷ್ಟ್ರ ಭಕ್ತರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರಾಷ್ಟ್ರ ಭಕ್ತರ ಸಂಘಟನೆ ಕಾರ್ಯಕರ್ತರು, ಸಚಿವ ಈಶ್ವರಪ್ಪ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಂತೋಷ್ ಪಾಟೀಲ್ ಸಾವಿನ ಪ್ರಕರಣದಲ್ಲಿ ಬೇಕಂತಲೆ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೆ.ಎಸ್.ಈಶ್ವರಪ್ಪ ಅವರು ಯಾವುದೆ ಕಾರಣಕ್ಕೂ ರಾಜೀನಾಮೆ ನೀಡಬಾರದು. ಅವರು ಸಚಿವರಾಗಿ ಮುಂದುವರೆಯಬೇಕು ಎಂದು ರಾಷ್ಟ್ರ ಭಕ್ತರ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.
ಬಿಜೆಪಿ ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200