ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 24 ಜೂನ್ 2022
ಕಾಂಗ್ರೆಸ್ ಪಕ್ಷವನ್ನು ಹೆದರಿಸಲು ಕೇಂದ್ರ ಸರ್ಕಾರ ಜಾರಿ ನಿದೇಶನಾಲಯವನ್ನು ದುಬರ್ಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ನಗರದ ಗೋಪಾಲಗೌಡ ಬಡಾವಣೆಯ ಆದಾಯ ತೆರಿಗೆ (INCOME TAX) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ INCOME TAX ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಕಳೆದೊಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ವಿಚಾರಣೆ ನೆಪದಲ್ಲಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ.ಡಿ. ಮೂಲಕ ನೋಟಿಸ್ ನೀಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ತನ್ನ ಕೋಮುವಾದ ಮೂಲಕ ಧಮನಕಾರಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಆಡಳಿತ ವೈಫಲ್ಯ ಕಂಡಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಈ ರೀತಿ ಇ.ಡಿ.ಯಂತಹ ಸ್ವಾಯತ್ತ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಅಧಿಕಾರಕ್ಕೆ ಬಂದ ಬಿಜೆಪಿ ಈವರೆಗೂ ಉದ್ಯೋಗ ಸೃಷ್ಟಿ ಮಾಡಿಲ್ಲ. ಬದಲಿಗೆ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಾ ನಿರುದ್ಯೋಗ ಸೃಷ್ಟಿ ಮಾಡುತ್ತಿದೆ ಎಂದು ಕಿಡಿಕಾರಿದರು.
ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಅಗ್ನಿಪಥ ಯೋಜನೆ ಮೂಲಕ ಸೈನ್ಯದ ವ್ಯವಸ್ಥೆಯನ್ನೇ ಹಾಳುಗೆಡವಲು ಬಿಜೆಪಿ ಸರ್ಕಾರ ಹೊರಟಿದೆ. ಇದನ್ನೆಲ್ಲ ಜನರಿಂದ ಮರೆಮಾಚಲು ಕಾಂಗ್ರೆಸ್ ನಾಯಕರ ಮೇಲೆ ಇ.ಡಿ. ಅಸ್ತ ಪ್ರಯೋಗಿಸುತ್ತಿದೆ. ತಕ್ಷಣವೇ ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರನ್ನು ಇ.ಡಿ. ವಿಚಾರಣೆಯಿಂದ ಮುಕ್ತಗೊಳಿಸಬೇಕು. ಇಲ್ಲವಾದರೆ ಮತ್ತಷ್ಟು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
INCOME TAX ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ಮುಖಂಡರಾದ ಎಂ.ಮಂಜುನಾಥಗೌಡ, ಕಲಗೋಡು ರತ್ನಾಕರ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರಮುಖರಾದ ಮಲ್ಲಿಕಾರ್ಜುನ ಚಂದ್ರಭೂಪಾಲ್, ವಿಜಯಕುಮಾರ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಎಚ್.ಸಿ.ಯೋಗೀಶ್, ಬಿ.ಎ.ರಮೇಶ್ ಹೆಗ್ಡೆ, ಕೆ.ರಂಗನಾಥ್, ಹೆಚ್.ಪಿ.ಗಿರೀಶ್, ಜಿ.ಡಿ.ಮಂಜುನಾಥ್, ಎನ್.ಡಿ.ಪ್ರವೀಣ್, ಚಿನ್ನಪ್ಪ, ಆರ್. ಮೋಹನ್, ಕುಮಾರೇಶ್, ಸುವರ್ಣಾ ನಾಗರಾಜ್, ಸೌಗಂಧಿಕಾ ಇತರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಇದನ್ನೂ ಓದಿ – ‘ಮನೆಯಲ್ಲಿ ಕೆಲವೇ ಗಂಟೆ ಕೆಲಸ ಮಾಡಿ ಲಕ್ಷ ಲಕ್ಷ ಸಂಪಾದಿಸಿ’, ಸ್ವಲ್ಪ ಯಾಮಾರಿದರೆ ಬೀಳುತ್ತೆ ಟೋಪಿ
ಇದನ್ನೂ ಓದಿ – ತಕ್ಷಣಕ್ಕೆ ಸಾಲ ಕೊಡ್ತಾರೆ, ಆಮೇಲೆ ಪ್ರಾಣವನ್ನೇ ತೆಗೆದುಬಿಡ್ತಾರೆ, ಬಡ, ಮಧ್ಯಮ ವರ್ಗದವರೆ ಇವರ ಟಾರ್ಗೆಟ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422