ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಎದುರಲ್ಲೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಚಿವ ಕೆ.ಎಸ್.ಈಶ‍್ವರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಎದುರು ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಮನವಿ ಸ್ವೀಕರಿಸಲು ಬಂದಿದ್ದರು. ಇದೇ ವೇಳೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದರು.

ಪ್ರತಿಭಟನಾ ಸ್ಥಳದಿಂದ ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಹೊರಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಲು ಆರಂಭಿಸಿದರು. ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದವರ ಕಡೆಗೆ ತಿರುಗಿದ ಸಚಿವ ಈಶ್ವರಪ್ಪ, ಕೈ ಮುಗಿದು ಕಾರು ಹತ್ತು ಹೊರಟರು.

ಇತ್ತ ಸಚಿವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರು ಬಂದೋಬಸ್ತ್ ಕೈಗೊಂಡರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment