VISL, MPM ಕಾರ್ಖಾನೆಗಳು; ಭದ್ರಾವತಿಯಲ್ಲಿ ಜೂನ್‌ 20ರಂದು ಮೆರವಣಿಗೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಭದ್ರಾವತಿ: ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 20ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಪತ್ರಿಕಾ ಭವನದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ನಾಯಕ ಕಾಮ್ರೇಡ್ ಡಿ.ಸಿ. ಮಾಯಣ್ಣನವರ 92ನೇ ಜನ್ಮದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನೆ ಮತ್ತು ಸತ್ಯಾಗ್ರಹ ನಡೆಯಲಿದೆ ಎಂದರು.

Bhadravathi-BN-Raju-press-meet-about-MPM-and-VISL

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿ ಮಾಡುವುದಾಗಿ ಹೇಳಿ ಕಾರ್ಮಿಕರಿಗೆ ಅನ್ಯಾಯ ಮಾಡಿವೆ. ಎಂಪಿಎಂ ಕಾರ್ಖಾನೆಯನ್ನು ತಕ್ಷಣ ಅಭಿವೃದ್ಧಿಪಡಿಸಬೇಕು. ಇಲ್ಲವೇ ಕಾರ್ಖಾನೆಗೆ ನೀಡಿರುವ 72 ಸಾವಿರ ಎಕರೆ ಜಮೀನನ್ನು ಕಾರ್ಮಿಕರಿಗೆ ಹಾಗೂ ಬಡಜನರಿಗೆ ಹಂಚಬೇಕು ಎಂದು ಆಗ್ರಹಿಸಿದರು. ರೈತರು ಮತ್ತು ಕಾರ್ಮಿಕರ ಸಮಸ್ಯೆಗಳು ಸೇರಿದಂತೆ ಒಟ್ಟು 15 ಬೇಡಿಕೆಗಳ ಈಡೇರಿಕೆಗೆ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಬ್ರಹ್ಮಲಿಂಗಯ್ಯ, ಎಂ.ವಿ.ಚಂದ್ರಶೇಖರ್, ಶ್ರೀನಿವಾಸ್, ಏಕಾಂತ್, ಶೇಖರ್ ಇದ್ದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!