SHIVAMOGGA LIVE NEWS | 22 NOVEMBER 2023
SHIMOGA : ವಿಮಾನ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಸ್ಥಳೀಯರು ಅಡ್ಡಿಪಡಿಸಿ, ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರ ಜೊತೆಗೆ ಮಾತಿನ ಚಕಮಕಿಯು ನಡೆಯಿತು.
ಏನಿದು ಮುಂದುವರೆದ ಕಾಮಗಾರಿ?
ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗಾಗಿ ಮುಂದುವರೆದ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಅಂದಾಜು 500 ಮೀಟರ್‌ನಷ್ಟು ಜಾಗವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಬಳಕೆ ಮಾಡಿಕೊಂಡಿದೆ. ಈ ಜಾಗದಲ್ಲಿ ನೈಟ್ ಲ್ಯಾಂಡಿಂಗ್‌ಗೆ ಅಗತ್ಯವಿರುವ ಬೀಕಾನ್‌ಗಳ ಅಳವಡಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇವತ್ತು ಕಾಮಗಾರಿ ಆರಂಭವಾಗುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳೀಯರ ಆಕ್ರೋಶಕ್ಕೆ ಕಾರಣವೇನು?
ಮುಂದುವರೆದ ಕಾಮಗಾರಿ ಹಿನ್ನೆಲೆ ವಿಮಾನ ನಿಲ್ದಾಣ ಕಾಂಪೌಂಡ್ ಪಕ್ಕದ ರಸ್ತೆ ಬಂದ್ ಮಾಡಲಾಗುತ್ತಿದೆ. ರಸ್ತೆಯ ಸುತ್ತಲು ಕಾಂಪೌಂಡ್ ಹಾಕಲಾಗುತ್ತಿದೆ. ಆದರೆ ಇದೇ ಮಾರ್ಗವಾಗಿ ಹೊಸ ಜೈಲು, ಸಿದ್ಧರಹಟ್ಟಿಗೆ ತೆರಳಬೇಕು. ರಸ್ತೆ ಬಂದ್ ಮಾಡಿದರೆ ಒಂದು ಕಿ.ಮೀ ಸುತ್ತಿ ಬಳಸಿ ಬರಬೇಕಿದೆ. ಆ ಮಾರ್ಗದಲ್ಲಿ ಜನ ಸಂಚಾರ ಕಡಿಮೆ. ಪುಂಡರ ಕಾಟ ಹೆಚ್ಚು. ಇದರಿಂದ ಮಹಿಳೆಯರು, ಮಕ್ಕಳು ಓಡಾಡುವುದು ಕಷ್ಟ ಮತ್ತು ಅಸುರಕ್ಷಿತ. ಹಾಗಾಗಿ ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸಬೇಕು, ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ
ಪೊಲೀಸರ ಜೊತೆಗೆ ಮಾತಿನ ಚಕಮಕಿ
ಇನ್ನು, ಪ್ರತಿಭಟನಾನಿರತನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಸ್ಥಳೀಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸುವುದು ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ ದಿನ 400 ಮಂದಿ ಪ್ರಯಾಣ, ಎಲ್ಲೆಲ್ಲಿಗೆ ಎಷ್ಟು ಜನ ತೆರಳಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200